top of page

ಅಂಗನವಾಡಿ ಕಾರ್ಯಕರ್ತೆ, ಸಹಾಯಕರ ಹುದ್ದೆಯ ಅಪೂರ್ಣಗೊಂಡ ಅರ್ಜಿಗಳನ್ನು ಮರುಸಲ್ಲಿಸಲು ಅವಕಾಶ

  • Writer: newsnowvijayanagar
    newsnowvijayanagar
  • Dec 27, 2024
  • 1 min read

ವಿಜಯನಗರ (ಹೊಸಪೇಟೆ), ಡಿ,27,ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಸಲ್ಲಿಸಿದ್ದ ಅಪೂರ್ಣಗೊಂಡ ಅರ್ಜಿಗಳನ್ನು ಮರು ಸಲ್ಲಿಸಲು ಅವಕಾಶ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಎಸ್.ಶ್ವೇತಾ ತಿಳಿಸಿದ್ದಾರೆ.


ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರು ಜಿಲ್ಲೆಯ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಹೊಸಪೇಟೆ,ಕೂಡ್ಲಿಗಿ, ಹರಪನಹಳ್ಳಿ,ಕೊಟ್ಟೂರು ತಾಲೂಕಿನಲ್ಲಿ ಈಗಾಗಲೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅರ್ಜಿ ಸಲ್ಲಿಸುವ ವೇಳೆಯಲ್ಲಿ ಕೆಲವು ತಾಂತ್ರಿಕ ಸಮಸ್ಯೆಯಿಂದಾಗಿ ಬಹುತೇಕರ ಅರ್ಜಿಗಳಲ್ಲಿ ಭಾವಚಿತ್ರ, ಸಹಿ ಮತ್ತು ದಾಖಲೆಗಳ ಮಾಹಿತಿ ಸಲ್ಲಿಸುವಲ್ಲಿ ಅಪೂರ್ಣಗೊಂಡಿವೆ. ಹಾಗಾಗೀ ಈ ಪ್ರಕ್ರಿಯೆ ಪೂರ್ಣಗೊಳಿಸಲು ಡಿ.26 ರಿಂದ ಜ.5 ರವರೆಗೆ ಮರು ಅರ್ಜಿ ಪೂರ್ಣವಾಗಿ ಸಲ್ಲಿಸಲು ಅನ್‌ಲೈನ್ ವೈಬ್‌ಸೈಟ್‌ನಲ್ಲಿ ಅವಕಾಶ ನೀಡಲಾಗಿದೆ. ವೈಬ್‌ಸೈಟ್: https://karnemakaone.kar.nic.in/abcd/ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments


bottom of page