top of page

ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಅಹ್ವಾನ

  • Writer: newsnowvijayanagar
    newsnowvijayanagar
  • May 26
  • 1 min read

ವಿಜಯನಗರ (ಹೊಸಪೇಟೆ): 2025-26ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪಿಯುಸಿ, ಐಟಿಐ ಮತ್ತು ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, 2ಎ, 2ಬಿ, 3ಎ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕೆ.ಬಿ.ರಾಮಚಂದ್ರಪ್ಪ ತಿಳಿಸಿದ್ದಾರೆ

ಪ್ರವರ್ಗ-1 ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ.2.50 ಲಕ್ಷ ರೂ, ಪ್ರವರ್ಗ-2, 2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷ ರೂಗಳು ಒಳಗಿರಬೇಕು. ಮೇ.20 ರಿಂದ ಜೂನ್.20 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಜೂನ್ 23 ರಂದು ತಾಲೂಕು ಕಲ್ಯಾಣಾಧಿಕಾರಿ ಪರಿಶೀಲನೆ ಮಾಡಲಿದ್ದಾರೆ. ಜೂನ್.27 ರಂದು ಹೊಸದಾಗಿ ಆಯ್ಕೆಯಾದ ವಿದ್ಯಾರ್ಥಿಗಳ ಆಯ್ಕೆಪಟ್ಟಿ ಪ್ರಕಟಣೆ ಮಾಡಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಜೂನ್.30 ರ ಒಳಗಾಗಿ ಪ್ರವೇಶ ಪಡೆಯಬೇಕು.

ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bawdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲೂಕ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬೇಕು. ಸಹಾಯವಾಣಿ ಸಂಖ್ಯೆ : 8050770004 ಮತ್ತು 8050770005 ಸಂಪರ್ಕಿಸಬೇಕೆ0ದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

Comments


bottom of page