top of page

ಮೇ.12 ರಂದು ಜಿಲ್ಲಾಡಳಿತದಿಂದ ಭಗವಾನ್ ಬುದ್ಧರ ಜನ್ಮ ದಿನಾಚರಣೆ

  • Writer: newsnowvijayanagar
    newsnowvijayanagar
  • 7 hours ago
  • 1 min read

ಜಯನಗರ(ಹೊಸಪೇಟೆ) ಮೇ9 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವಿಶ್ವದ ಶ್ರೇಷ್ಠ ದಾರ್ಶನಿಕ ಭಗವಾನ್ ಬುದ್ಧರ ಜಯಂತಿ ಆಚರಣೆಯನ್ನು ಮೇ.12 ರಂದು, ಸೋಮವಾರ, ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಲಿದೆ.

ಕಾರ್ಯಕ್ರಮವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಉದ್ಘಾಟಿಸಲಿದ್ದು, ಹೊಸಪೇಟೆ ಶಾಸಕರಾದ ಹೆಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಳ್ಳಾರಿ ಸಂಸದ ಈ.ತುಕಾರಾಮ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹಡಗಲಿ ಶಾಸಕ ಎಲ್.ಕೃಷ್ಣನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಶಾಸಕ ಬಿ.ಚಂದ್ರಶೇಖರ್ ಪಾಟೀಲ್, ವಿಧಾನ ಪರಿಷತ್ ಶಾಸಕ ಶಶಿಲ್.ಜಿ.ನಮೋಶಿ, ವಿಧಾನ ಪರಿಷತ್ ಶಾಸಕ ವೈ.ಎಂ.ಸತೀಶ್, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ ಭಾಗವಹಿಸಲಿದ್ದಾರೆ. ಪ್ರಗತಿಪರ ಚಿಂತಕರು ಮತ್ತು ಸಾಹಿತಿಗಳಾದ ಬಿ.ಪೀರ್ ಬಾಷ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ ಷಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ ಉಪಸ್ಥಿತರಿರಲಿದ್ದಾರೆ.

Recent Posts

See All
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರವೇಶಾತಿ ಆರಂಭ

ವಿಜಯನಗರ(ಹೊಸಪೇಟೆ)ಮೇ.9: 2025-26 ನೇ ಸಾಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಾತಿಗಳು ಆರಂಭವಾಗಿವೆ ಎಂದು ಹೂವಿನಹಡಗಲಿ ಕಾಲೇಜಿನ...

 
 
 
ರೈತರು ಹತ್ತಿ ಬೆಳೆ ಬಿತ್ತನೆಗೆ ಬೇಸಿಗೆ ಸಕಾಲವಲ್ಲ,ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಸಲಹೆ

ವಿಜಯನಗರ(ಹೊಸಪೇಟೆ), ಮೇ.9: ಹತ್ತಿ ಬೆಳೆ ಬಿತ್ತನೆಗೆ ಉದ್ದೇಶಿಸಿರುವ ಜಿಲ್ಲಾ ವ್ಯಾಪ್ತಿಯ ರೈತರಿಗೆ ಕೃಷಿ ವಿಜ್ಞಾನಿಗಳ ಶಿಫಾರಸ್ಸಿನಂತೆ ಬೇಸಿಗೆ ಸಕಾಲವಲ್ಲ, ಜೂನ್...

 
 
 
ಮೇ.10 ರಂದು ವಿಶ್ವಗುರು ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯೋತ್ಸವ

ವಿಜಯನಗರ(ಹೊಸಪೇಟೆ) ಮೇ.08 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಹೊಸಪೇಟೆ ವತಿಯಿಂದ ವಿಶ್ವಗುರು ಸಾಂಸ್ಕೃತಿಕ ನಾಯಕ...

 
 
 

Comments


bottom of page