top of page

ಇಂದಿನಿಂದ ಮೂರು ದಿನಗಳ ಕಾಲ ವಿಜಯನಗರ ಜಿಲ್ಲೆಗೆ ಉಪಲೋಕಾಯುಕ್ತರ ಭೇಟಿ

  • Writer: newsnowvijayanagar
    newsnowvijayanagar
  • Mar 13
  • 1 min read

ಸಾರ್ವಜನಿಕರಿಂದ ದೂರುಗಳ ಸ್ವೀಕಾರ/ಲೋಕಾಯುಕ್ತ ಪ್ರಕರಣಗಳ ವಿಚಾರಣೆ


ವಿಜಯನಗರ(ಹೊಸಪೇಟೆ) ಮಾರ್ಚ್.13 : ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತರಾದ ಬಿ.ವೀರಪ್ಪ ಅವರು ಮಾ.13 ರಿಂದ 15 ರವರೆಗೆ ವಿಜಯನಗರ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ ಎಂದು ಹೊಸಪೇಟೆ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

ಹೊಸಪೇಟೆ ನಗರದ ಡ್ಯಾಂ ರಸ್ತೆಯ ನೆಹರು ಕಾಲೋನಿಯಲ್ಲಿರುವ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನ ಹತ್ತಿರದ ಸಹಕಾರಿ ಕಲ್ಯಾಣ ಮಂಟಪದಲ್ಲಿ ಮಾ.13 ರಂದು ಬೆ.10 ಗಂಟೆಯಿಂದ ಸಂಜೆ.5 ಗಂಟೆವರೆಗೆ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು. ಸಂಜೆ 5:30 ರಿಂದ 6:30 ರವರೆಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಬಗ್ಗೆ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಮಾ.14 ರಂದು ಬೆ.6:30 ರಿಂದ ರಾತ್ರಿ 8:30 ರವರೆಗೆ ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳ ಹಾಗೂ ಕಚೇರಿಗಳಿಗೆ ಭೇಟಿ ನೀಡುವರು.ಮಾ.15 ರಂದು ಬೆ.10 ಗಂಟೆಯಿಂದ ಮಧ್ಯಾಹ್ನ 1:15 ರವರೆಗೆ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತರಲ್ಲಿ ದಾಖಲಾದ ದೂರುಗಳ ವಿಚಾರಣೆ ಮತ್ತು ಮಾ.13 ರಂದು ಸ್ವೀಕೃತಗೊಂಡ ದೂರುಗಳ ಪರಿಶೀಲನೆ ನಡೆಸುವರು. ಮಧ್ಯಾಹ್ನ 1:45 ರಿಂದ 2:30 ರವರೆಗೆ ವಿಜಯನಗರ ಜಿಲ್ಲಾ ವಕೀಲರ ಸಂಘದ ವಕೀಲರೊಂದಿಗೆ ಸಂವಹನ ಸಭೆ. ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯವರೆಗೆ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತರಲ್ಲಿ ದಾಖಲಾದ ದೂರುಗಳ ವಿಚಾರಣೆ ಮತ್ತು ಮಾ.13 ರಂದು ಸ್ವೀಕೃತಗೊಂಡ ದೂರುಗಳ ಪರಿಶೀಲನೆ ನಡೆಸಲಾಗುವುದು.ಸಂಜೆ 5:45 ರಿಂದ ಸಂಜೆ 7 ಗಂಟೆಯವರೆಗೆ ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳ ಹಾಗೂ ಕಚೇರಿಗಳಿಗೆ ಭೇಟಿ ನೀಡುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent Posts

See All
ಜೆಸ್ಕಾಂ ಗ್ರಾಹಕರ ಸಂವಾದ ಸಭೆ

ವಿಜಯನಗರ(ಹೊಸಪೇಟೆ)ಮೇ: ಹೊಸಪೇಟೆ ನಗರ ಉಪವಿಭಾಗ -1 ರ ಡ್ಯಾಂ ರಸ್ತೆಯ ಜೆಸ್ಕಾಂ ಕಚೇರಿಯಲ್ಲಿ ಮೇ.17 ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಗ್ರಾಹಕರ ಕುಂದು...

 
 
 

Comments


bottom of page