top of page

ಹೊಸಪೇಟೆಯಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆ

  • Writer: newsnowvijayanagar
    newsnowvijayanagar
  • 5 days ago
  • 1 min read

ವಿಜಯನಗರ (ಹೊಸಪೇಟೆ) : ತಾಲೂಕಿನ ಮೊದಲ ಕೋವಿಡ್ ಪ್ರಕರಣ ಪತ್ತೆ ಮತ್ತೆ ಸದ್ದಿಲ್ಲದೆ ಕೊರೊನಾ ಎಂಟ್ರಿ ವಿಜಯನಗರ ಜಿಲ್ಲೆಯ ಜನರಿಗೆ ಬಿಗ್ ಶಾಕ್ ನಗರದ ಸಾಯಿ ಕಾಲೋನಿ 58 ವರ್ಷದ ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಶೀತಾ ಜಾಸ್ತಿ ಆಗಿರುವುದರಿಂದ ಕೋವಿಡ್ ಟೆಸ್ಟ್ ಮಾಡಿಸಿದರು ಪೋಸಿಟಿವ್ ಎಂದು ಬಂದಿದೆ , ಐಎಲ್‌ಐ, ಸಾರಿ ಪ್ರಕರಣಗಳ ಮೇಲೆ ನಿಗಾ ಇರಿಸಲು ಆರೋಗ್ಯ ಇಲಾಖೆಯು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಪಿಎಚ್‌ಸಿ, ಸಮುದಾಯ ಆರೋಗ್ಯ ಕೇಂದ್ರಗಳು ಸಿಎಚ್‌ಸಿ ಹಾಗೂ ಸಾರ್ವಜನಿಕ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ 47 ಪಿಎಚ್‌ಸಿಗಳು, ಏಳು ಸಿಎಚ್‌ಸಿಗಳು, ಮೂರು ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಒಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಇದೆ. ಐಎಲ್ಐ, ಸಾರಿ ಪ್ರಕರಣಗಳು ದಾಖಲಾದರೆ ನಿಗಾ ಇಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಿಎಚ್ಒ.ಶಂಕರ್ ನಾಯ್ಕ್ ಸೂಚನೆ ನೀಡಿದ್ದಾರೆ.

ಈ ಮಧ್ಯೆ, ತಾಲ್ಲೂಕಿನ ಕಮಲಾಪುರದಲ್ಲಿ ಶನಿವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಲು ಬಂದಿದ್ದ ಶಾಸಕ ಎಚ್‌.ಆರ್‌.ಗವಿಯಪ್ಪ ಅವರು ಡಿಎಚ್‌ಒ ಅವರಿಗೆ ಕರೆ ಮಾಡಿ ಕೊರೊನಾ ಸ್ಥಿತಿಗತಿ ಬಗ್ಗೆ ವಿಚಾರಿಸಿದರು.



‘ಕೊರೊನಾ ಪ್ರಕರಣ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ, ಶಂಕಿತ ಕೊರೊನಾ ಪೀಡಿತೆಗೆ ಉತ್ತಮ ಆರೈಕೆ ನೀಡಿ’ ಎಂದು ಶಾಸಕರು ಸೂಚಿಸಿದರು. ಆತಂಕ ಬೇಡಾ ಮನೆ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಮತ್ತು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಡಿಎಚ್ಒ ಶಂಕರ್ ನಾಯಕ್ ಸ್ಪಷ್ಟನೆ ನೀಡಿದ್ದಾರೆ.

Recent Posts

See All
ಜೆಸ್ಕಾಂ ಗ್ರಾಹಕರ ಸಂವಾದ ಸಭೆ

ವಿಜಯನಗರ(ಹೊಸಪೇಟೆ)ಮೇ: ಹೊಸಪೇಟೆ ನಗರ ಉಪವಿಭಾಗ -1 ರ ಡ್ಯಾಂ ರಸ್ತೆಯ ಜೆಸ್ಕಾಂ ಕಚೇರಿಯಲ್ಲಿ ಮೇ.17 ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಗ್ರಾಹಕರ ಕುಂದು...

 
 
 

Comments


bottom of page