top of page

ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ-೨೦೨೫ ಜಾಗೃತಿ ಜಾಥಾ ನಿಮಿತ್ಯ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ

  • Writer: newsnowvijayanagar
    newsnowvijayanagar
  • Jan 4
  • 1 min read

ಕೊಪ್ಪಳ ,ಜ,04: ಸಂಸ್ಥಾನ ಶ್ರೀ ಗವಿಮಠದ ಜಾತ್ರಾ ಮಹೋತ್ಸವವೆಂದರೆ, ವಿನೂತನ ವಿಶೇಷತೆಯ ಹೊಸತನದ ಆಧುನಿಕ ಸ್ಪರ್ಷತೆಯ ಸಂಗಮ.ಪ್ರತಿ ವರ್ಷ ಒಂದಲ್ಲಾ ಒಂದು ರೀತಿಯ ಜನಜೀವನದ ಪ್ರಗತಿಗೆ ಜಾಗೃತಿ ಮೂಡಿಸಲು ಅಗತ್ಯವಾದ ಉಪಯುಕ್ತ ಜನಜಾಗೃತಿ ಕಾರ್ಯಕ್ರಮವಾಗಿದೆ. ಈ ವರ್ಷವೂ ಸಹ ವಿನೂತನವಾದ ಜಾಗೃತಿ ಮೂಡಿಸಲು ಶ್ರೀಮಠವು ಹೊಸ ಸಂಕಲ್ಪದೊಂದಿಗೆ ಸಿದ್ಧವಾಗಿದೆ.


ಪ್ರಸ್ತುತ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ೨೦೨೫ರ ಸಾಮಾಜಿಕ ಜಾಗೃತಿ ವಿಷಯವಾಗಿ ‘ಸಕಲಚೇತನ’ ಎಂಬ ಶೀರ್ಷಿಕೆಯ ಅಡಿಯಲ್ಲಿ ವಿಕಲಚೇತನರ ನಡೆ ಸಕಲಚೇತನದ ಕಡೆ ಎಂಬ ಘೋಷ ವಾಕ್ಯದೊಂದಿಗೆ ಜಾಗೃತಿ ಜಾಥಾ ದಿನಾಂಕ ೧೧.೦೧.೨೦೨೫ರಂದು ಜರುಗಲಿದೆ. ಶ್ರೀ ಮಠದ ಭಕ್ತರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಆರೋಗ್ಯ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮತ್ತು ಮಹಾವೀರ ಲಿಂಬ್ ಸೆಂಟರ್, ಹುಬ್ಬಳ್ಳಿ ಹಾಗೂ ಸ್ಥಳೀಯ ಶಿಕ್ಷಣ ಸಂಸ್ಥೆಗಳ ಸಹಕಾರ ಸಹಯೋಗವಿರುತ್ತದೆ. ಜಾಥಾವು ಶನಿವಾರ ಬೆಳಿಗ್ಗೆ ೮.೦೦ ಗಂಟೆಗೆ ಕೊಪ್ಪಳದ ಬಾಲಕಿಯರ ಸರಕಾರಿ ಕಾಲೇಜಿನ ಮೈದಾನ (ತಾಲೂಕು ಕ್ರೀಡಾಂಗಣ)ದಿಂದ ಆರಂಭವಾಗಿ ಅಶೋಕ ವೃತ್ತ, ಜವಾಹರ ರಸ್ತೆ, ಗಡಿಯಾರ ಕಂಬದ ಮೂಲಕ ಶ್ರೀಗವಿಮಠದ ಜಾತ್ರಾ ಮಹಾದಾಸೋಹಕ್ಕೆ ತಲುಪಿ ಸಮಾರೋಪ ಸಮಾರಂಭದೊAದಿಗೆ ಮುಕ್ತಾಯವಾಗಲಿದೆ.


ಸದರಿ ಅಭಿಯಾನದ ಅಂಗವಾಗಿ ದಿನಾಂಕ ೦೨.೦೧.೨೦೨೫ ರಂದು ಸ್ಥಳಿಯ ಶಾಲಾ, ಕಾಲೇಜು ಮಟ್ಟದಲ್ಲಿ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ‘ವಿಕಲಚೇತನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಮಾಜದ ಸ್ಪಂದನೆ’ ಎಂಬ ವಿಷಯದ ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಥಳಿಯ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸದರಿ ವಿಷಯದ ಮೇಲೆ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ನಾಳೆ ದಿನಾಂಕ ೦೪.೦೧.೨೦೨೫, ಶನಿವಾರದಂದು ಬೆಳಗ್ಗೆ ೧೧:೦೦ಗಂಟೆಗೆ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಜಾಗೃತಿ ಜಾಥಾ ನಡಿಗೆಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಗೌರವಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ೯೭೪೨೩೦೭೧೫೩. ೯೯೮೬೫೯೧೦೭೬ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಲು ಗವಿಮಠ ಪ್ರಕಟಣೆಯಲ್ಲಿ ತಿಳಿಸಿದೆ.

Comments


bottom of page