top of page

ಸಿಲಿನ ತಾಪ ಹೆಚ್ಚಳ : ಕಾರ್ಮಿಕರ ಆರೋಗ್ಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ. ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ ಸಲಹೆ.

  • Writer: newsnowvijayanagar
    newsnowvijayanagar
  • Apr 18
  • 1 min read

ವಿಜಯನಗರ(ಹೊಸಪೇಟೆ) ಏ,18: ಬಿಸಿಲು, ಬಿಸಿಗಾಳಿ ತಾಪಕ್ಕೆ ಕಾರ್ಮಿಕರು ಹೈರಾಣಾಗದಂತೆ ಮುಂಜಾಗೃತ ಕ್ರಮಗಳನ್ನು ಪಾಲಿಸುವ ಮೂಲಕ ಆರೋಗ್ಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ.ಎಂ.ಪಿ. ದೊಡ್ಡಮನಿ ಹೇಳಿದರು.



ಹೊಸಪೇಟೆ ತಾಲೂಕಿನ ವ್ಯಾಸನಕೆರೆಯಲ್ಲಿ ಹೂಳು ತೆಗೆಯುವ ನರೇಗಾ ಕೂಲಿಕಾರ್ಮಿಕರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಗುರುವಾರ ಅವರು ಮಾತನಾಡಿದರು, ಬೇಸಿಗೆಯಲ್ಲಿ ನಿರ್ಜಲೀಕರಣವಾಗದಂತೆ ಪ್ರತಿ 20 ನಿಮಿಷಕ್ಕೊಮ್ಮೆ ಶುದ್ಧ ಕುಡಿಯುವ ನೀರನ್ನು ಕುಡಿಯಬೇಕು.ಓಆರ್‌ಎಸ್ ಬಳಸಿ ನೀರು ಅಥವಾ ಮಾತ್ರೆಗಳನ್ನು ಸೇವಿಸಿದರೆ ಒಳ್ಳೆಯದು.ತಲೆ ನೋವು, ಮೈಕೈ ನೋವು ಕಂಡು ಬಂದರೆ ನಿರ್ಲಕ್ಷಿಸದೇ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯಾಧಿಕಾರಿಗಳ ಬಳಿ ಚಿಕಿತ್ಸೆ ಪಡೆಯಬೇಕು. ಆದಷ್ಟು ಕಾರ್ಮಿಕರು ಬೆ.11 ರಿಂದ ಸಂಜೆ.4 ರವರೆಗೆ ನೇರ ಸೂರ್ಯನ ಬಿಸಿಲಿನಲ್ಲಿ ಕೆಲಸ ನಿರ್ವಹಿಸದಂತೆ ಎಚ್ಚರ ವಹಿಸಬೇಕು.ಕೆಲಸ ಮಾಡುವ ಸ್ಥಳದಲ್ಲಿ ಕಾರ್ಮಿಕರು ಆಯಾಸಗೊಂಡರೆ ವಿಶ್ರಾಂತಿ ಪಡೆಯಲು ನೆರಳಿನ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಳ್ಳಬೇಕು. ಕಾರ್ಮಿಕರು ಆದಷ್ಟು ಹತ್ತಿಯ ಮತ್ತು ಶ್ವೇತ ವರ್ಣದ ತುಂಬು ತೋಳಿನ ಅಂಗಿ, ಬಟ್ಟೆ ಮತ್ತು ಟೋಪಿಯನ್ನು ಧರಿಸುವುದು ಉತ್ತಮ.ಕಾರ್ಮಿಕರು ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ವಹಿಸಬೇಕು ಎಂದರು.

ಕಾರ್ಮಿಕರಿಗೆ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ಎಲ್ಲರಿಗೂ ಮಧುಮೇಹ, ರಕ್ತದೊತ್ತಡ ಪರೀಕ್ಷೆ ನಡೆಸಲಾಯಿತು. ತಾಲೂಕಿನ ಮಲಪನಗುಡಿ, ಸೀತಾರಾಮ್‌ತಾಂಡ, ಕಲ್ಲಹಳ್ಳಿ, ನಾಗೇನಹಳ್ಳಿ, ಹೊಸೂರು ಗ್ರಾಪಂನ ಸುಮಾರು 2500 ಕ್ಕೂ ಹೆಚ್ಚು ನರೇಗಾ ಕೂಲಿ ಕಾರ್ಮಿಕರು ಚಿಕಿತ್ಸೆ ಪಡೆದರು.

ಈ ವೇಳೆ ಮರಿಯಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಧಾಕೃಷ್ಣ, ಜಿಲ್ಲಾ ಅರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ,ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಧನಲಕ್ಷ್ಮೀ,ಆರೋಗ್ಯ ನಿರೀಕ್ಷಣಾಧಿಕಾರಿ ನಾರಾಯಣ, ಸಮುದಾಯ ಆರೋಗ್ಯ ಅಧಿಕಾರಿ ಭರತ, ರೇಣುಕಾ, ಜಿಪಂನ ಐಇಸಿ ಸಂಯೋಜಕ ನಾಗರಾಜ ಇದ್ದರು.

Comments


bottom of page