top of page

ಮಾ.27 ರಂದು ಹೊಸಪೇಟೆ ನಗರಸಭೆ ವಿಶೇಷ ಸಾಮಾನ್ಯ ಸಭೆ

  • Writer: newsnowvijayanagar
    newsnowvijayanagar
  • Mar 25
  • 1 min read

ವಿಜಯನಗರ (ಹೊಸಪೇಟೆ), ಮಾರ್ಚ್.24 : ನಗರಸಭೆಯ ವಿಶೇಷ ಸಾಮಾನ್ಯ ಸಭೆಯನ್ನು ಮಾ.27 ರಂದು ಬೆ.11 ಗಂಟೆಗೆ ನಗರಸಭಾ ಸಭಾಂಗಣದಲ್ಲಿ ಅಧ್ಯಕ್ಷರಾದ ರೂಪೇಶ್ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಆಯುಕ್ತರಾದ ಮನೋಹರ್ ತಿಳಿಸಿದ್ದಾರೆ.

ವಿಶೇಷ ಸಾಮಾನ್ಯ ಸಭೆಯಲ್ಲಿ 2025-26 ನೇ ಸಾಲಿನ ಅಂದಾಜು ಆಯ್ಯವ್ಯಯ ಅಂಗೀಕರಿಸಲಾಗುವುದು. ಆಯ್ಯವ್ಯಯ ತಯಾರಿ ಬಗ್ಗೆ ಮೊದಲೇ ಮತ್ತು ಎರಡನೇ ಸಾರ್ವಜನಿಕ ಸಲಹಾ ಸೂಚನೆ ಸಭೆಯನ್ನು ಮಾ.25 ಮತ್ತು 26 ರಂದು ಬೆ.11 ಗಂಟೆಗೆ ಮಾನ್ಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಗರಸಭೆಯ ಸಭಾಂಗಣದಲ್ಲಿ ನಡೆಯಲಿದೆ. ಆಯವ್ಯಯ ತಯಾರಿಸಲು ಅಭಿವೃದ್ಧಿ ಯೋಜನೆಗಳ ಕುರಿತು ನಗರಸಭೆ ಮಾನ್ಯ ಉಪಾಧ್ಯಕ್ಷರು, ಗೌರವಾನ್ವಿತ ಸದಸ್ಯರುಗಳು, ನಗರದ ಗಣ್ಯ ವ್ಯಕ್ತಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವರ್ತಕರು, ನಿವೃತ್ತ ಅಧಿಕಾರಿಗಳು, ನೌಕರರು, ಪತ್ರಕರ್ತರು, ಹಿರಿಯ ನಾಗರಿಕರು, ಸಾರ್ವಜನಿಕರು ತಮ್ಮ ಸಲಹೆ ಸೂಚನೆಗಳನ್ನು ಲಿಖಿತ ರೂಪದಲ್ಲಿ ಕಚೇರಿ ವೇಳೆಯಲ್ಲಿ ನೀಡಬಹುದಾಗಿದೆ. ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಿ ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent Posts

See All
ಜೆಸ್ಕಾಂ ಗ್ರಾಹಕರ ಸಂವಾದ ಸಭೆ

ವಿಜಯನಗರ(ಹೊಸಪೇಟೆ)ಮೇ: ಹೊಸಪೇಟೆ ನಗರ ಉಪವಿಭಾಗ -1 ರ ಡ್ಯಾಂ ರಸ್ತೆಯ ಜೆಸ್ಕಾಂ ಕಚೇರಿಯಲ್ಲಿ ಮೇ.17 ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಗ್ರಾಹಕರ ಕುಂದು...

 
 
 

Comments


bottom of page