top of page

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

  • Writer: newsnowvijayanagar
    newsnowvijayanagar
  • May 22
  • 1 min read

ವಿಜಯನಗರ (ಹೊಸಪೇಟೆ), ಮೇ.22: ಹೊಸಪೇಟೆ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2025-26ನೇ ಸಾಲಿಗೆ ಹೊಸದಾಗಿ ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ, ಇತರೆ ವರ್ಗಗಳಿಗೆ ಸೇರಿದ 5 ರಿಂದ 10 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಜೂನ್ 16 ರೊಳಗಾಗಿ ವೆಬ್‌ಸೈಟ್ https://shp.karnataka.gov.in/bcwd ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷ ರೂ, ಪ್ರವರ್ಗ-2ಎ, 2ಬಿ,3ಎ, 3ಬಿ, ವರ್ಗದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ.1 ಲಕ್ಷದೊಳಗಿರಬೇಕು. ತಾಲೂಕಿನ ಜಿ.ನಾಗಲಾಪುರ, ಹೊಸಪೇಟೆ ನಗರ ಹಾಗೂ ಕಮಲಾಪುರದಲ್ಲಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಹೊಸಪೇಟೆ ನಗರದಲ್ಲಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ www.bcwd.karnataka.gov.in ನ್ನು ಸಂಪರ್ಕಿಸಬಹುದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments


bottom of page