top of page

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಅಹ್ವಾನ

  • Writer: newsnowvijayanagar
    newsnowvijayanagar
  • Feb 9
  • 1 min read

ವಿಜಯನಗರ(ಹೊಸಪೇಟೆ) ಫೆ.09: 2024-25ನೇ ಸಾಲಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಸ್.ಶ್ವೇತಾ ತಿಳಿಸಿದ್ದಾರೆ.


ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಪ್ರತಿಬಿಂಬಿಸಲು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಇಲಾಖೆಯಿಂದ ಪ್ರತಿ ವರ್ಷ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.


ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಆರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವ ರಕ್ಷಣೆ ಮಾಡಿರುವಂತಹ ಮಹಿಳೆಯರು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.


ತಾಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಅರ್ಜಿ ಪಡೆದು ದಾಖಲೆಗಳೊಂದಿಗೆ ಫೆ.14 ರೊಳಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯನಗರ ಕಚೇರಿಗೆ ಸಲ್ಲಿಸಬಹುದಾಗಿದೆ.

Recent Posts

See All
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರವೇಶಾತಿ ಆರಂಭ

ವಿಜಯನಗರ(ಹೊಸಪೇಟೆ)ಮೇ.9: 2025-26 ನೇ ಸಾಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಾತಿಗಳು ಆರಂಭವಾಗಿವೆ ಎಂದು ಹೂವಿನಹಡಗಲಿ ಕಾಲೇಜಿನ...

 
 
 
ಮೇ.12 ರಂದು ಜಿಲ್ಲಾಡಳಿತದಿಂದ ಭಗವಾನ್ ಬುದ್ಧರ ಜನ್ಮ ದಿನಾಚರಣೆ

ಜಯನಗರ(ಹೊಸಪೇಟೆ) ಮೇ9 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವಿಶ್ವದ ಶ್ರೇಷ್ಠ ದಾರ್ಶನಿಕ ಭಗವಾನ್ ಬುದ್ಧರ ಜಯಂತಿ...

 
 
 
ರೈತರು ಹತ್ತಿ ಬೆಳೆ ಬಿತ್ತನೆಗೆ ಬೇಸಿಗೆ ಸಕಾಲವಲ್ಲ,ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಸಲಹೆ

ವಿಜಯನಗರ(ಹೊಸಪೇಟೆ), ಮೇ.9: ಹತ್ತಿ ಬೆಳೆ ಬಿತ್ತನೆಗೆ ಉದ್ದೇಶಿಸಿರುವ ಜಿಲ್ಲಾ ವ್ಯಾಪ್ತಿಯ ರೈತರಿಗೆ ಕೃಷಿ ವಿಜ್ಞಾನಿಗಳ ಶಿಫಾರಸ್ಸಿನಂತೆ ಬೇಸಿಗೆ ಸಕಾಲವಲ್ಲ, ಜೂನ್...

 
 
 

Comments


bottom of page