top of page

ಅಭಿವೃದ್ಧಿಗೆ ಆದ್ಯತೆ ಸಂಸದರ ಕಚೇರಿ ಸಿದ್ಧ : ಇ.ತುಕಾರಾಂ.

  • Writer: newsnowvijayanagar
    newsnowvijayanagar
  • Jan 18
  • 1 min read

ವಿಜಯನಗರ(ಹೊಸಪೇಟೆ )ಜ,18: ಜನಸಾಮಾನ್ಯರ ಸಮಸ್ಯೆಗೆ ಶೀಘ್ರ ಸ್ಪಂದಿಸಲು ಸಂಸದರ ಕಚೇರಿ ಸದಾ ಸಿದ್ದವಿರಲಿದೆ, ಅಭಿವೃದ್ಧಿಗೆ ಆದ್ಯತೆ ನೀಡುವಲ್ಲಿ ಜನಸಂಪರ್ಕ ಕಚೇರಿ ಸಹಕಾರಿ ಎಂದು ಬಳ್ಳಾರಿ ಲೋಕಸಭಾ ಸದಸ್ಯ ಇ.ತುಕಾರಾಂ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೂತನವಾಗಿ ಸ್ಥಾಪಿಸಿರುವ ಸಂಸದರ ಕಚೇರಿ ಉದ್ಘಾಟನೆ ಮಾಡಿ ಶುಕ್ರವಾರ ಅವರು ಮಾತನಾಡಿದರು, ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸಂಸದರ ಕಚೇರಿ ತೆರೆಯಲಾಗಿದೆ. ಸಾಮಾನ್ಯ ಜನರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಸಂಸದರ ಗಮನಕ್ಕೆ ತರಲು ಅವಕಾಶಕ್ಕಾಗಿ ಜನಸಂಪರ್ಕ ಕಚೇರಿ ತೆರೆಯಲಾಗಿದೆ.ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸಲು ಪ್ರಾಮಾಣಿಕವಾದ ಕಾರ್ಯ ನಿರ್ವಹಿಸಲಿದ್ದೇವೆ.ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ ಕಾರ್ಯ ನಿರ್ವಹಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ನಗರದ ಬಿಡಿಸಿಸಿ ಬ್ಯಾಂಕಿನ ಆವರಣದಲ್ಲಿ ಸಂಸದರ ಕಚೇರಿ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದರು.


ಈ ಸಂದರ್ಭದಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕಿ ಅನ್ನಪೂರ್ಣ ತುಕಾರಾಂ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹಮ್ಮದ್ ಇಮಾಮ್



ನಿಯಾಜಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ಮೊಹಮ್ಮದ್ ನೊಂಗ್ಜಾಯ ಅಕ್ರಮ್ ಅಲಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಸೇರಿದಂತೆ ಹಿರಿಯ ಮುಖಂಡರು, ಇದ್ದರು.

Comments


bottom of page