top of page

ಜನಾರ್ದನರೆಡ್ಡಿ ಹೇಳಿಕೆ ಖಂಡಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ

  • Writer: newsnowvijayanagar
    newsnowvijayanagar
  • Jan 29
  • 1 min read

ವಿಜಯನಗರ (ಹೊಸಪೇಟೆ)ಜ,29:ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಅವಹೇಳನಕಾರಿ ಹೇಳಿಕೆ

ನೀಡಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ನೇತೃತ್ವದಲ್ಲಿ ವಾಲ್ಮೀಕಿ ಸಮಾಜ ಬಾಂಧವರು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನಾಕಾರರು,ವಾಲ್ಮೀಕಿ ನಾಯಕ ಸಮಾಜದ ಮುಖಂಡರಾಗಿ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಶ್ರೀರಾಮುಲು ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಜನಾರ್ಧನ ರೆಡ್ಡಿಯವರು ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಟೈರಿಗೆ ಬೆಂಕಿ ಹಚ್ಚಿ, ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ,ವಾರದೊಳಗೆ ಜನಾರ್ದನ ರೆಡ್ಡಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಾಂತ ಉಗ್ರ ಪ್ರತಿಭಟನೆ ಮಾಡಲಾಗುವುದು ಎಚ್ಚರಿಸಿದರು.

ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ವಿರುದ್ಧ ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದೇವೆ.ಒಂದು ವಾರದಲ್ಲಿ ಎಫ್‌ಐಆರ್ ದಾಖಲಿಸಿ,ಕಾನೂನು ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.


ಈ ಸಂದರ್ಭದಲ್ಲಿ ಗಜ್ಜಲ ಶ್ರೀನಾಥ, ಬಿ.ಎಸ್.ಜಂಬಯ್ಯ ನಾಯಕ, ಕಿನ್ನಾಳ್ ಹನುಮಂತ, ದೇವರಮನಿ ಶ್ರೀನಿವಾಸ, ಗುಡಿ ಗುಡಿ ಸೋಮನಾಥ, ಬೆಳಗೋಡ್ ಅಂಬಣ್ಣ, ಗೋಸಲ ಭರಪ್ಪ, ಜಂಬಾನಹಳ್ಳಿ ವಸಂತ, ಕಣ್ಣೆ ಶ್ರೀಕಂಠ, ಎಸ್.ಎಸ್.ಚಂದ್ರಶೇಖರ್, ಸಿಂದಗೇರಿ ದೇವೇಂದ್ರಪ್ಪ, ತಾರಿಹಳ್ಳಿ ವೆಂಕಟೇಶ್, ಗುಡಿಕುಂಟಿ ಮಲ್ಲಿಕಾರ್ಜುನ, ಕಟಗಿ ಜಂಬಯ್ಯ, ನಿಲ್ಲಿಗಿ ಕರೆ ಹನುಮಂತ, ಗುಂಡಿ ಪ್ರಶಾಂತ್, ಕಟಗಿ ವಿಜಯಕುಮಾರ್ ಇತರರಿದ್ದರು.

Comments


bottom of page