top of page

ಪಿಡಿಐಟಿಯಲ್ಲಿ ವಿದ್ಯುತ್ ವಿಭಾಗದಿಂದ ಐದು ದಿನಗಳ ಕಾರ್ಯಾಗಾರ”

  • Writer: newsnowvijayanagar
    newsnowvijayanagar
  • May 12
  • 1 min read

ಎಲೆಕ್ಟ್ರಿಕಲ್ ಸ್ವಿಚ್‌ಗೇರ್‌ನ  ಸುರಕ್ಷತೆ, ರಕ್ಷಣೆ ಮತ್ತು ಅನ್ವಯಿಕೆಗಳು ಎಂಬ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ


ಪದವಿಯೊಂದೇ ಮಹತ್ವವಲ್ಲ ಕೌಶಲ್ಯ ಮುಖ್ಯ - ಡಿ.ವಿ.ಶಿವಾನಂದ್


ಹೊಸಪೇಟೆ : ಕೇವಲ ಪದವಿಗಳಿಸುವುದೊಂದೇ ಮಹತ್ವವಲ್ಲ ವಿದ್ಯಾರ್ಥಿಗಳು ಪ್ರಯೋಗಿಕವಾಗಿ ಕೌಶಲ್ಯ ಬೆಳೆಸಿಕೊಳ್ಳುವುದು ಮುಖ್ಯ ಎಂದು ಶಿವಾನಂದ ಡಿ.ವಿ ಅಭಿಪ್ರಾಯಪಟ್ಟರು.    


ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯವು ಸೋಮವಾರದಂದು ವಿದ್ಯುತ್ ವಿಭಾಗದ ವತಿಯಿಂದ ಐಕ್ಯೂಎಸಿಯ ಸಹಯೋಗದಲ್ಲಿ “ಎಲೆಕ್ಟ್ರಿಕಲ್ ಸ್ವಿಚ್‌ಗೇರ್‌ನ ಸುರಕ್ಷತೆ, ರಕ್ಷಣೆ ಮತ್ತು ಅನ್ವಯಿಕೆಗಳು” ಎಂಬ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದ ಐದು ದಿನದ ಕಾರ್ಯಾಗಾರವನ್ನು ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಿ ಚಾಲನೆ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ತುಮಕೂರಿನ ಡಿಬಿಸನ್ಸ್ ಎಲೆಕ್ಟ್ರಿಕಲ್ ಕಂಟ್ರೋಲ್ ಪಾನೆಲ್ಸ್ ಮ್ಯಾನುಫ್ಯಾಕ್ಚರಿಂಗ್ ಕಂಪೆನಿಯ ಸಿಇಓ ಶಿವಾನಂದ ಡಿ.ವಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವೇಶ ಶೆಟ್ಟಿ.ಎಸ್ ಅವರು ಆಗಮಿಸಿ ವಿದ್ಯಾರ್ಥಿಗಳಿಗೆ ವಿದ್ಯುತ್ ಉಪಕರಣಗಳ ಬಳಕೆ, ಸುರಕ್ಷತೆ, ರಕ್ಷಣೆ ಹಾಗೂ ಕೈಗಾರಿಕಾ ವಲಯದಲ್ಲಿ ಅದರ ಅನ್ವಯಿಕೆಗಳ ಕುರಿತು ಐದು ದಿನದ ವಿಶೇಷ ಪ್ರಾಯೋಗಿಕ ತರಬೇತಿಯನ್ನು ನೀಡಿದರು.   

ree

ಮುಂದುವರೆದು ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್ ಡಾಕ್ಟರೇಟ್‌ಗಳಿಸಿದ್ದರೂ ಇಂದಿನ ಎಲೆಕ್ಟ್ರಿಕಲ್ ಇಂಜಿನಿಯರ್‌ಗಳಿಗೆ ಮನೆಯಲ್ಲಿ ಕೆಟ್ಟುಹೋದ ಮೋಟಾರ್ ಅನ್ನು ಸರಿಪಡಿಸಲು ಬರುವುದಿಲ್ಲ, ಇಂತಹ ಇಂಜಿನಿಯರ್‌ಗಳು ಕೈಗಾರಿಕಾ ಉದ್ಯಮಗಳಲ್ಲಿ ಕೌಶಲ್ಯದ ಕೊರತೆಯಿಂದ ಉದ್ಯೋಗಗಳಿಂದ ವಂಚಿತರಾಗುತ್ತಾರೆ. ಇದರಿಂದ ವಿದ್ಯಾರ್ಥಿಗಳಲ್ಲಿ ಶಿಕ್ಷಣ ಕ್ಷೇತ್ರ ಮತ್ತು ಕೈಗಾರಿಕೆ ನಡುವಿನ ಅಂತರವನ್ನು ಸರಿದೂಗಿಸಲು ಇಂತಹ ತರಬೇತಿಗಳು ಪಠ್ಯದಲ್ಲಿ ಸೇರ್ಪಡೆಯಾಗಬೇಕು ಎಂದು ಹೇಳಿದರು. ಕೈಗಾರಿಕಾ ವಲಯದಲ್ಲಿ ಕಾರ್ಯನಿರ್ವಹಿಸುವ ಸಂಧರ್ಭದಲ್ಲಿ ಯಾವುದಾದರೂ ಉಪಕರಣಗಳು ಸುರಕ್ಷತೆ ವಿಫಲವಾಗಿ ಕೆಟ್ಟರೆ ಇಂಜಿನಿಯರ್‌ಗಳು ನೂರಾರು ಪ್ರಶ್ನೆಗಳಿಗೆ ಗುರಿಯಾಗುತ್ತಾರೆ ಎಂದರು.

Recent Posts

See All
ಜೆಸ್ಕಾಂ ಗ್ರಾಹಕರ ಸಂವಾದ ಸಭೆ

ವಿಜಯನಗರ(ಹೊಸಪೇಟೆ)ಮೇ: ಹೊಸಪೇಟೆ ನಗರ ಉಪವಿಭಾಗ -1 ರ ಡ್ಯಾಂ ರಸ್ತೆಯ ಜೆಸ್ಕಾಂ ಕಚೇರಿಯಲ್ಲಿ ಮೇ.17 ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಗ್ರಾಹಕರ ಕುಂದು...

 
 
 

Comments


bottom of page