top of page

ಮೇ.2 ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಆರಂಭ

  • Writer: newsnowvijayanagar
    newsnowvijayanagar
  • 3 days ago
  • 1 min read

ವಿಜಯನಗರ(ಹೊಸಪೇಟೆ), ಏಪ್ರಿಲ್.29 : ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಜಿಲ್ಲೆಯಲ್ಲಿ ಮೂರು ಹಂತಗಳಲ್ಲಿ ಮೇ.2 ರಿಂದ ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಮಂಜುನಾಥ.ಹೆಚ್.ವಿ ತಿಳಿಸಿದ್ದಾರೆ.

ಮೊದಲನೇ ಹಂತದಲ್ಲಿ ಮನೆ-ಮನೆ ಸಮೀಕ್ಷೆ ಮೇ.2 ರಿಂದ ಮೇ.17 ರವರೆಗೆ, ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಮೇ.19 ರಿಂದ ಮೇ.23ರವರೆಗೆ ಹಾಗೂ ಸ್ವಯಂ ಘೋಷಣೆ ಮೇ.19 ರಿಂದ ಮೇ.23 ರವರೆಗೆ ಅವಧಿಯಲ್ಲಿ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಈಗಾಗಲೇ ಜಿಲ್ಲಾಮಟ್ಟದಲ್ಲಿ ಜಂಟಿನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ವಿಜಯನಗರ ಹಾಗೂ ವಿಧಾನಸಭಾ ಕ್ಷೇತ್ರವಾರು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದೆ. ಸಮೀಕ್ಷೆಯ ಕುರಿತು ಯಾವುದೇ ಮಾಹಿತಿ ಪಡೆಯಲು ವಿಜಯನಗರ ರಮೇಶ್ 8095002829, ಹೊಸಪೇಟೆ ನಜೀಮಾ ಭಾನು 9108777499, ಹಗರಿಬೊಮ್ಮನಹಳ್ಳಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಆನಂದ.ವೈ.ಡೊಳ್ಳಿನ 9901980762, ಕೂಡ್ಲಿಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಶಾಹೇಖಾ ಅಹ್ಮದಿ 8105909630, ಹಡಗಲಿ ಕಚೇರಿ ಅಧೀಕ್ಷಕರಾದ ಜ್ಯೋತಿ 9482608061 ಹರಪನಹಳ್ಳಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಗಂಗಪ್ಪ.ಎಸ್.ಆರ್ 9739094433 ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments


bottom of page