top of page

ಬಿಸಿಲಿನ ತಾಪಮಾನ ಹೆಚ್ಚಳ ನಿರ್ಲಕ್ಷ್ಯ ಬೇಡ

  • Writer: newsnowvijayanagar
    newsnowvijayanagar
  • Mar 19
  • 1 min read

ವಿಜಯನಗರ(ಹೊಸಪೇಟೆ), ಮಾ.19 : ಮಾರ್ಚ್, ಏಪ್ರಿಲ್, ಮೇ ತಿಂಗಳ ಅಂತ್ಯದವರೆಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಪ್ರತಿಯೊಬ್ಬರು 20 ನಿಮಿಷಕ್ಕೊಮ್ಮೆ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್.ಆರ್.ಶಂಕರನಾಯ್ಕ ಸಲಹೆ ನೀಡಿದರು.

ree

ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಸ್ನೇಹ ಬಳಗದಿಂದ ನೂತನವಾಗಿ ಆರಂಭಿಸಿರುವ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆಯನ್ನು ಉದ್ಘಾಟಿಸಿ ಮಂಗಳವಾರ ಅವರು ಮಾತನಾಡಿದರು, ಅಧಿಕ ಬಿಸಿಲಿನ ತಾಪಮಾನಕ್ಕೆ ಪ್ರತಿಯೊಬ್ಬರು ನಿರ್ಜಲೀಕರಣ ಸಮಸ್ಯೆ ಎದುರಿಸಲಿದ್ದಾರೆ. ಸಾರ್ವಜನಿಕರು ಬೇಸಿಗೆಯಲ್ಲಿ ಬಾಯಾರಿಕೆ ಆಗದಿದ್ದರೂ ಪದೇ ಪದೇ ನೀರು ಅಥವಾ ಹಣ್ಣಿನ ರಸಗಳನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕಿದೆ. ಬೇಸಿಗೆಯಲ್ಲಿ ಮೈ ಬೆವರಿದಷ್ಟು ಒಳ್ಳೆಯದು. ಆದಷ್ಟು ನೈಸರ್ಗಿಕ ಜ್ಯೂಸ್‌ಗಳನ್ನು ಹೆಚ್ಚಾಗಿ ಸೇವಿಸಿ. ಕಲ್ಲಂಗಡಿ,ಕರಬೂಜ, ಕಿತ್ತಳೆ,ದ್ರಾಕ್ಷಿ, ಅನಾನಾಸ್, ಸೌತೆಕಾಯಿ,ಎಳನೀರು ಸವಿಯುವುದು, ಮನೆಯಲ್ಲಿಯೇ ಸಿದ್ದಪಡಿಸಿದ ನಿಂಬೆಹಣ್ಣಿನ ಶರಬತ್ತು,ಮಜ್ಜಿಗೆ ಸೇರಿದಂತೆ ಹಣ್ಣಿನ ಪಾನೀಯಗಳಿಗೆ ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ. ವಿಶೇಷವಾಗಿ ಬಿಸಿಲಿನಿಂದ ನಿರ್ಜಲೀಕರಣವಾದ ರೋಗಿಗಳಿಗೆ ಸಾರ್ವಜನಿಕ ಉಪ ವಿಭಾಗದ ಆಸ್ಪತ್ರೆಯಲ್ಲಿ ಹವಾನಿಯಂತ್ರಿತ ಐದು ವಿಶೇಷ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲೂ ಈ ವ್ಯವಸ್ಥೆ ಇರಲಿದೆ ಎಂದರು.

ಈ ವೇಳೆ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ ನಾಯಕ, ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸತೀಶ ಚಂದ್ರ,ಜಿಲ್ಲಾ ಕುಷ್ಠ ರೋಗ ನಿಯಂತ್ರಾಣಧಿಕಾರಿ ಡಾ.ರಾಧಿಕಾ, ಹೊಸಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ.ಬಸವರಾಜ,



ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಯೋಗಲಕ್ಷ್ಮೀ, ವೆಂಕಟೇಶ್, ಗುಂಡಿ ರಾಘವೇಂದ್ರ, ಹನುಮಂತರೆಡ್ಡಿ, ಫಾತೀಮಾಬೀ,ಜಿಲ್ಲಾ ಆರೋಗ್ಯ ಶಿಕ್ಷಾಣಧಿಕಾರಿ ಎಂ.ಪಿ.ದೊಡ್ಡಮನಿ ಇದ್ದರು.

Recent Posts

See All
ಜೆಸ್ಕಾಂ ಗ್ರಾಹಕರ ಸಂವಾದ ಸಭೆ

ವಿಜಯನಗರ(ಹೊಸಪೇಟೆ)ಮೇ: ಹೊಸಪೇಟೆ ನಗರ ಉಪವಿಭಾಗ -1 ರ ಡ್ಯಾಂ ರಸ್ತೆಯ ಜೆಸ್ಕಾಂ ಕಚೇರಿಯಲ್ಲಿ ಮೇ.17 ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಗ್ರಾಹಕರ ಕುಂದು...

 
 
 

Comments


bottom of page