top of page

ದೃಷ್ಟಿ ದೋಷ ಸರ್ಕಾರಿ ನೌಕರ ವಿಕಲಚೇತನರಿಗೆ ವಿಶೇಷ ರಜೆ

  • Writer: newsnowvijayanagar
    newsnowvijayanagar
  • Jan 2
  • 1 min read

ವಿಜಯನಗರ(ಹೊಸಪೇಟೆ)ಜ,2:ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಸ್ತಾವನೆಯಲ್ಲಿ ಪ್ರತಿ ವರ್ಷ ದಿವಂಗತ ಲೂಯಿ ಬ್ರೈಲ್ ರವರ ಜನ್ಮ ದಿನದ ಅಂಗವಾಗಿ ಜನವರಿ 04ರಂದು ನಡೆಯುವ ವಿಶ್ವ ಬ್ರೈಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ದೃಷ್ಟಿದೋಷವುಳ್ಳ ವಿಕಲಚೇತನ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಒದಗಿಸುವಂತೆ ಪ್ರಧಾನ ಕಾರ್ಯದರ್ಶಿಗಳು, ನ್ಯಾಷನಲ್ ಫೆಡರೇಷನ್ ಆಫ್ ದಿ ಬ್ಲೈಂಡ್, ಬೆಂಗಳೂರು ಇವರು ಕೋರಿದ್ದು, ಅದರಂತೆ ದಿನಾಂಕ: 04.01.2025 ರಂದು ದಿವಂಗತ ಲೂಯಿ ಬ್ರೈಲ್ ರವರ ಜನ್ಮ ದಿನದ ಅಂಗವಾಗಿ ನಡೆಯುವ ವಿಶ್ವ ಬ್ರೈಲ್


ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಅಂಧ ಸರ್ಕಾರಿ ನೌಕರರಿಗೆ ಒಂದು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.


ಜನ್ಮ ದಿನದ ಅಂಗವಾಗಿ ಆಚರಿಸಲಾಗುವ ವಿಶ್ವ ಬ್ರೈಲ್ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ದೃಷ್ಟಿ ದೋಷವುಳ್ಳ ವಿಕಲಚೇತನ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸಿ,ಕಾರ್ಯಕ್ರಮದಲ್ಲಿ ಭಾಗವಹಿಸುವ ನೌಕರರಿಗೆ ಹಾಜರಾತಿ ಪ್ರಮಾಣ ಪತ್ರವನ್ನು ಒದಗಿಸುವ ಹಾಗೂ ಈ ವಿಶೇಷ ಸಾಂದರ್ಭಿಕ ರಜೆ ದಿನಕ್ಕೆ ಸರ್ಕಾರದಿಂದ ಯಾವುದೇ ದಿನ ಭತ್ಯೆ ಅಥವಾ ಪ್ರಯಾಣ ಭತ್ಯೆಯ ಕ್ರೈಮ್‌ನ್ನು ಪರಿಗಣಿಸಲಾಗುವುದಿಲ್ಲವೆಂಬಷರತ್ತುಗಳಿಗೊಳಪಟ್ಟು ಒಂದು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ.

Kommentare


bottom of page