top of page

ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ

  • Nov 20, 2024
  • 1 min read

Updated: Nov 21, 2024

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.










ಬೆಂಗಳೂರು: ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚನೆಗೆ ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.

ರಾಜ್ಯಾದ್ಯಂತ 4,244 ಹೊಸ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ


ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಐ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು ಎಂದರು.

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಶಿರಸಿಯಲ್ಲಿ ಆಧುನಿಕ ಭಗೀರಥಿ: ಸಂಕಷ್ಟ ನೋಡಲಾಗದೆ ಅಂಗನವಾಡಿ ಮಕ್ಕಳಿಗಾಗಿ ಬಾವಿ ತೋಡುತ್ತಿರುವ ಮಹಿಳೆ!

ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ ೯ ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದ ಸಚಿವರು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

Comments


bottom of page