top of page

ತಮಿಳುನಾಡಿನಲ್ಲಿ ಭಾರೀ ಮಳೆ; ತೂತುಕುಡಿ ಸೇರಿದಂತೆ ಐದು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

  • Nov 20, 2024
  • 1 min read

ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 22 ರಿಂದ ಭಾರೀ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ree









ಚೆನ್ನೈ: ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಮನಾಥಪುರಂ, ತೆಂಕಸಿ, ತೂತುಕಡಿ, ತಿರುನಲ್ವೇಲಿ ಮತ್ತು ಕಾರೈಕಾಲ್‌ನಲ್ಲಿ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಜಿಲ್ಲೆಗಳ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.

ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 22 ರಿಂದ ಭಾರೀ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಲ್ಲಿ ನವೆಂಬರ್ 22 ರಿಂದ 28 ರವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಆದರೆ ಈ ಅವಧಿಯಲ್ಲಿ ರಾಜ್ಯದ ಉಳಿದ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.


ಅಕ್ಟೋಬರ್ 1 ರಿಂದ ನವೆಂಬರ್ 15 ರವರೆಗೆ ಈಶಾನ್ಯ ಮಾನ್ಸೂನ್ ಸಮಯದಲ್ಲಿ ತಮಿಳುನಾಡು 276 ಮಿಮೀ ಮಳೆಯನ್ನು ಪಡೆದಿದೆ. ಕೊಯಂಬತ್ತೂರಿನಲ್ಲಿ ಅತಿ ಹೆಚ್ಚು 418 ಮಿಲಿ ಮಳೆಯಾಗಿದೆ. ಚೆನ್ನೈ ಸೇರಿದಂತೆ 17 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದೆ. ಉತ್ತಮ ಮಳೆಯಿಂದಾಗಿ ಮೆಟ್ಟೂರು, ಭವಾನಿಸಾಗರ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.

ತಮಿಳುನಾಡು: ಅಕಾಲಿಕ ಮಳೆ, ನಾಗಪಟ್ಟಣಂನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅತ್ಯಧಿಕ ಮಳೆ ಹಾಗೂ ಕರ್ನಾಟಕದಿಂದ ಒಳ ಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಜಲಾಶಯಗಳ ಸಂಗ್ರಹಣಾ ಮಟ್ಟ ಏರಿಕೆಯಾಗಿರುವುದಾಗಿ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Comments


bottom of page